Chamarajanagara District Court Recruitment 2026 Details : ಚಾಮರಾಜನಗರ ಜಿಲ್ಲಾ ನ್ಯಾಯಾಂಗ ಘಟಕದ ಅಧೀನ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು 25 ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನ ಆಹ್ವಾನಿಸಲಾಗಿದೆ. ಆಸಕ್ತ ಹಾಗು ಅರ್ಹ ಅಭ್ಯರ್ಥಿಗಳು ಕೊನೆಯದಿನಾಂಕದೊಳಗೆ ಅರ್ಜಿಯನ್ನ ಸಲ್ಲಿಸಬೇಕಾಗಿದೆ. ಈ Chamarajanagara District ಕೋರ್ಟ್ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ವೇತನ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಶುಲ್ಕ ಹಾಗೂ ಇತರೆ ಮುಖ್ಯ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ದಯವಿಟ್ಟು ಪೂರ್ತಿ ಓದಿ.
Chamarajanagara District Court Recruitment 2026 Vacancy Details
ಹುದ್ದೆ :
ಶೀಘ್ರಲಿಪಿಗಾರರು ಗ್ರೇಡ್ 3, ಬೆರಳಚ್ಚುಗಾರರು, ಬೆರಳಚ್ಚು ನಕಲುಗಾರರು ಹಾಗು ಸೇವಕರು.
ಒಟ್ಟು ಹುದ್ದೆಗಳು:
ಒಟ್ಟು 25 ಹುದ್ದೆಗಳ ಭರ್ತಿಗೆ ಅರ್ಜಿಯನ್ನ ಆಹ್ವಾನಿಸಲಾಗಿದೆ ಸ್ನೇಹಿತರೆ.
| ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
| ಶೀಘ್ರಲಿಪಿಗಾರರು ಗ್ರೇಡ್-3 | 2 |
| ಬೆರಳಚ್ಚುಗಾರರು | 6 |
| ಸೇವಕರು | 13 |
| ಬೆರಳಚ್ಚು ನಕಲುಗಾರರು | 4 |
ಕರ್ತವ್ಯ ಸ್ಥಳ :
ಈ Chamarajanagara District ಕೋರ್ಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಚಾಮರಾಜನಗರ ಜಿಲ್ಲೆ, ಕರ್ನಾಟಕದಲ್ಲಿ ಕರ್ತವ್ಯವನ್ನ ನಿರ್ವಹಿಸಬೇಕು.
ಶೈಕ್ಷಣಿಕ ವಿದ್ಯಾರ್ಹತೆ :
ಬೆರಳಚ್ಚುಗಾರರು ಹುದ್ದೆಗಳಿಗೆ –
2nd PUC ಅಥವಾ ಯಾವುದೇ 3 ವರ್ಷದ Diploma ಕೋರ್ಸ್ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ನಡೆಸಿರುವ ಹಿರಿಯ ದರ್ಜೆ ಕನ್ನಡ & ಆಂಗ್ಲ ಭಾಷೆಗಳ ಬೆರಳಚ್ಚು ವಿಷಯದಲ್ಲಿ ತೇರ್ಗಡೆ ಹೊಂದಿರಬೇಕು ಸ್ನೇಹಿತರೆ.
ಶೀಘ್ರಲಿಪಿಗಾರರು ಗ್ರೇಡ್ 3 ಹುದ್ದೆಗಳಿಗೆ –
ದ್ವಿತೀಯ PUC / ಯಾವುದೇ 3 ವರ್ಷದ ಡಿಪ್ಲೋಮ ಕೋರ್ಸ್ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ನಡೆಸಿರುವ ಹಿರಿಯ ದರ್ಜೆ ಕನ್ನಡ & ಆಂಗ್ಲ ಭಾಷೆಗಳ ಬೆರಳಚ್ಚು & ಶೀಘ್ರಲಿಪಿ ವಿಷಯದಲ್ಲಿ ತೇರ್ಗಡೆ ಹೊಂದಿರಬೇಕು.
ಬೆರಳಚ್ಚು ನಕಲುಗಾರರು ಹುದ್ದೆಗಳು –
ದ್ವಿತೀಯ ಪಿಯುಸಿ / ಯಾವುದೇ ಮೂರು ವರ್ಷದ ಡಿಪ್ಲೊಮಾ ಕೋರ್ಸ್ /ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ನಡೆಸಿರುವ ಕಿರಿಯ ದರ್ಜೆ ಕನ್ನಡ & ಆಂಗ್ಲ ಭಾಷೆಗಳ ಬೆರಳಚ್ಚು ವಿಷಯದಲ್ಲಿ ತೇರ್ಗಡೆ ಹೊಂದಿರಬೇಕು.
ಸೇವಕ ಹುದ್ದೆಗಳಿಗೆ –
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ SSLC ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು & ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು.
ವಯೋಮಿತಿ :
ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗು ವಯೋಮಿತಿ ಈ ರೀತಿ ಇದೆ.
- ಸಾಮಾನ್ಯ ಅಭ್ಯರ್ಥಿಗಳಿಗೆ – ಗರಿಷ್ಠ 35+5 ವರ್ಷಗಳು
- ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38+5 ವರ್ಷಗಳು
- ಪ.ಜಾತಿ, ಪ. ವರ್ಗ, ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 40+5 ವರ್ಷಗಳು
ವೇತನ ಶ್ರೇಣಿ :
| ಹುದ್ದೆಗಳು | ವೇತನ ಶ್ರೇಣಿ |
| ಶೀಘ್ರಲಿಪಿಗಾರರು ಗ್ರೇಡ್ 3 | ರೂ. 44,425 ರಿಂದ ರೂ. 83,700 |
| ಬೆರಳಚ್ಚುಗಾರರು | ರೂ. 34,100 ರಿಂದ ರೂ. 67,600 |
| ಬೆರಳಚ್ಚು ನಕಲುಗಾರರು | ರೂ. 34,100 ರಿಂದ ರೂ. 67,600 |
| ಸೇವಕರು | ರೂ. 27,000 ರಿಂದ ರೂ. 46,675 |
ಆಯ್ಕೆ ವಿಧಾನ :
Chamarajanagara District Court ನೇಮಕಾತಿಯ ಆಯ್ಕೆ ಪ್ರಕ್ರಿಯೆಯು ಹುದ್ದೆಯ ಶ್ರೇಣಿಗೆ ಅನುಗುಣವಾಗಿ ಬದಲಾಗುತ್ತದೆ:
- ಶೀಘ್ರಲಿಪಿಗಾರ, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಹುದ್ದೆಗೆ: ಅರ್ಹತಾ ಪರೀಕ್ಷೆಗಳಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು ಸಾಮರ್ಥ್ಯ ಪರೀಕ್ಷೆಯಲ್ಲಿ ಗಳಿಸುವ ಅಂಕ ಆಧಾರದ ಮೇಲೆ 1:5 ಅನುಪಾತದಲ್ಲಿ ಸಂದರ್ಶನ.
- ಸೇವಕ ಹುದ್ದೆಗೆ: 10ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಗರಿಷ್ಠ ಅಂಕಗಳ ಆಧಾರದ ಮೇಲೆ 1:10 ಅನುಪಾತದಲ್ಲಿ ಸಂದರ್ಶನ.
ಅರ್ಜಿ ಸಲ್ಲಿಸುವ ವಿಧಾನ :
ಚಾಮರಾಜನಗರ ಜಿಲ್ಲಾ ನ್ಯಾಯಾಲಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅನುಸರಿಸಬೇಕಾದ ಕ್ರಮಗಳು ಹೀಗಿವೆ:
- ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಹಾಗು ಅಲ್ಲಿ ಕೇಳಿರುವ ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಿ.
- ಇಲಾಖೆಯ ವೆಬ್ಸೈಟ್ ಗೆ ಭೇಟಿ ನೀಡಿ / ಈ ಕೆಳಗಡೆ ನೀಡಲಾದ ಅಪ್ಲೈ ಆನ್ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
- ನಂತರ ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ವಿಳಾಸ, ಮೊಬೈಲ್ ಸಂಖ್ಯೆ ಇತ್ಯಾದಿ) ಸರಿಯಾಗಿ ಭರ್ತಿ ಮಾಡಿ, ಮುಂದಿನ ಹಂತಕ್ಕೆ ಹೋಗುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
- ಅಪ್ಲಿಕೇಷನ್ ನಲ್ಲಿ ಯಾವುದೇ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಮೊದಲು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ ಅಪ್ಲೋಡ್ ಮಾಡಿ).
- ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ಅರ್ಜಿ ಶುಲ್ಕ :
ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಮಾತ್ರ ಪಾವತಿಸಬೇಕು.
- ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ರೂ. 200
- ಪ.ಜಾತಿ, ಪ.ಪಂ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ – ಶುಲ್ಕ ವಿನಾಯಿತಿ ನೀಡಲಾಗಿದೆ.
ಪ್ರಮುಖ ದಿನಾಂಕಗಳು :
| ವಿವರಣೆ | ದಿನಾಂಕ |
| ಆನ್ಲೈನ್ ಅರ್ಜಿ ಮತ್ತು ಶುಲ್ಕ ಪಾವತಿಗೆ ಪ್ರಾರಂಭ ದಿನಾಂಕ | ಮಾರ್ಚ್ 13, 2026 |
| ಆನ್ಲೈನ್ ಅರ್ಜಿಗೆ ಅಂತಿಮ ದಿನಾಂಕ | ಏಪ್ರಿಲ್ 13, 2026 |
| ಶುಲ್ಕ ಪಾವತಿಗೆ ಅಂತಿಮ ದಿನಾಂಕ | ಏಪ್ರಿಲ್ 16, 2026 |
ಪ್ರಮುಖ ದಿನಾಂಕಗಳು :
| ವಿವರಣೆ | ಲಿಂಕ್ |
| ಅಧಿಕೃತ ಅಧಿಸೂಚನೆ (STENOGRAPHER) | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ಅಧಿಸೂಚನೆ (TYPIST) | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ಅಧಿಸೂಚನೆ (TYPIST COPYIST) | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ಅಧಿಸೂಚನೆ (PEON) | ಇಲ್ಲಿ ಕ್ಲಿಕ್ ಮಾಡಿ |
| ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ (ಮಾರ್ಚ್ 13 ರಿಂದ ಪ್ರಾರಂಭ) |
| Telegram Group Link | ಇಲ್ಲಿ ಕ್ಲಿಕ್ ಮಾಡಿ |
| WhatsApp Group Link | ಇಲ್ಲಿ ಕ್ಲಿಕ್ ಮಾಡಿ |
