ಚಾಮರಾಜನಗರ ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ 2026 – Chamarajanagara District Court Recruitment 2026

Chamarajanagara District Court Recruitment 2026 Details : ಚಾಮರಾಜನಗರ ಜಿಲ್ಲಾ ನ್ಯಾಯಾಂಗ ಘಟಕದ ಅಧೀನ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು 25 ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನ ಆಹ್ವಾನಿಸಲಾಗಿದೆ. ಆಸಕ್ತ ಹಾಗು ಅರ್ಹ ಅಭ್ಯರ್ಥಿಗಳು ಕೊನೆಯದಿನಾಂಕದೊಳಗೆ ಅರ್ಜಿಯನ್ನ ಸಲ್ಲಿಸಬೇಕಾಗಿದೆ. ಈ Chamarajanagara District ಕೋರ್ಟ್ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ವೇತನ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಶುಲ್ಕ ಹಾಗೂ ಇತರೆ ಮುಖ್ಯ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ದಯವಿಟ್ಟು ಪೂರ್ತಿ ಓದಿ.

Chamarajanagara District Court Recruitment 2026 Vacancy Details

ಶೀಘ್ರಲಿಪಿಗಾರರು ಗ್ರೇಡ್ 3, ಬೆರಳಚ್ಚುಗಾರರು, ಬೆರಳಚ್ಚು ನಕಲುಗಾರರು ಹಾಗು ಸೇವಕರು.

ಒಟ್ಟು 25 ಹುದ್ದೆಗಳ ಭರ್ತಿಗೆ ಅರ್ಜಿಯನ್ನ ಆಹ್ವಾನಿಸಲಾಗಿದೆ ಸ್ನೇಹಿತರೆ.

ಹುದ್ದೆಗಳ ಹೆಸರುಹುದ್ದೆಗಳ ಸಂಖ್ಯೆ
ಶೀಘ್ರಲಿಪಿಗಾರರು ಗ್ರೇಡ್-32
ಬೆರಳಚ್ಚುಗಾರರು6
ಸೇವಕರು13
ಬೆರಳಚ್ಚು ನಕಲುಗಾರರು4

ಈ Chamarajanagara District ಕೋರ್ಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಚಾಮರಾಜನಗರ ಜಿಲ್ಲೆ, ಕರ್ನಾಟಕದಲ್ಲಿ ಕರ್ತವ್ಯವನ್ನ ನಿರ್ವಹಿಸಬೇಕು.

ಬೆರಳಚ್ಚುಗಾರರು ಹುದ್ದೆಗಳಿಗೆ –
2nd PUC ಅಥವಾ ಯಾವುದೇ 3 ವರ್ಷದ Diploma ಕೋರ್ಸ್ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ನಡೆಸಿರುವ ಹಿರಿಯ ದರ್ಜೆ ಕನ್ನಡ & ಆಂಗ್ಲ ಭಾಷೆಗಳ ಬೆರಳಚ್ಚು ವಿಷಯದಲ್ಲಿ ತೇರ್ಗಡೆ ಹೊಂದಿರಬೇಕು ಸ್ನೇಹಿತರೆ.

ಶೀಘ್ರಲಿಪಿಗಾರರು ಗ್ರೇಡ್ 3 ಹುದ್ದೆಗಳಿಗೆ
ದ್ವಿತೀಯ PUC / ಯಾವುದೇ 3 ವರ್ಷದ ಡಿಪ್ಲೋಮ ಕೋರ್ಸ್ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ನಡೆಸಿರುವ ಹಿರಿಯ ದರ್ಜೆ ಕನ್ನಡ & ಆಂಗ್ಲ ಭಾಷೆಗಳ ಬೆರಳಚ್ಚು & ಶೀಘ್ರಲಿಪಿ ವಿಷಯದಲ್ಲಿ ತೇರ್ಗಡೆ ಹೊಂದಿರಬೇಕು.

ಬೆರಳಚ್ಚು ನಕಲುಗಾರರು ಹುದ್ದೆಗಳು –
ದ್ವಿತೀಯ ಪಿಯುಸಿ / ಯಾವುದೇ ಮೂರು ವರ್ಷದ ಡಿಪ್ಲೊಮಾ ಕೋರ್ಸ್ /ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ನಡೆಸಿರುವ ಕಿರಿಯ ದರ್ಜೆ ಕನ್ನಡ & ಆಂಗ್ಲ ಭಾಷೆಗಳ ಬೆರಳಚ್ಚು ವಿಷಯದಲ್ಲಿ ತೇರ್ಗಡೆ ಹೊಂದಿರಬೇಕು.

ಸೇವಕ ಹುದ್ದೆಗಳಿಗೆ –
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ SSLC ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು & ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು.

ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗು ವಯೋಮಿತಿ ಈ ರೀತಿ ಇದೆ.

  • ಸಾಮಾನ್ಯ ಅಭ್ಯರ್ಥಿಗಳಿಗೆ – ಗರಿಷ್ಠ 35+5 ವರ್ಷಗಳು
  • ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38+5 ವರ್ಷಗಳು
  • ಪ.ಜಾತಿ, ಪ. ವರ್ಗ, ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 40+5 ವರ್ಷಗಳು
ಹುದ್ದೆಗಳುವೇತನ ಶ್ರೇಣಿ
ಶೀಘ್ರಲಿಪಿಗಾರರು ಗ್ರೇಡ್ 3ರೂ. 44,425 ರಿಂದ ರೂ. 83,700
ಬೆರಳಚ್ಚುಗಾರರುರೂ. 34,100 ರಿಂದ ರೂ. 67,600
ಬೆರಳಚ್ಚು ನಕಲುಗಾರರುರೂ. 34,100 ರಿಂದ ರೂ. 67,600
ಸೇವಕರುರೂ. 27,000 ರಿಂದ ರೂ. 46,675

Chamarajanagara District Court ನೇಮಕಾತಿಯ ಆಯ್ಕೆ ಪ್ರಕ್ರಿಯೆಯು ಹುದ್ದೆಯ ಶ್ರೇಣಿಗೆ ಅನುಗುಣವಾಗಿ ಬದಲಾಗುತ್ತದೆ:

  • ಶೀಘ್ರಲಿಪಿಗಾರ, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಹುದ್ದೆಗೆ: ಅರ್ಹತಾ ಪರೀಕ್ಷೆಗಳಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು ಸಾಮರ್ಥ್ಯ ಪರೀಕ್ಷೆಯಲ್ಲಿ ಗಳಿಸುವ ಅಂಕ ಆಧಾರದ ಮೇಲೆ 1:5 ಅನುಪಾತದಲ್ಲಿ ಸಂದರ್ಶನ.
  • ಸೇವಕ ಹುದ್ದೆಗೆ: 10ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಗರಿಷ್ಠ ಅಂಕಗಳ ಆಧಾರದ ಮೇಲೆ 1:10 ಅನುಪಾತದಲ್ಲಿ ಸಂದರ್ಶನ.

ಚಾಮರಾಜನಗರ ಜಿಲ್ಲಾ ನ್ಯಾಯಾಲಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅನುಸರಿಸಬೇಕಾದ ಕ್ರಮಗಳು ಹೀಗಿವೆ:

  • ಆನ್‌ಲೈನ್‌ ಮುಖಾಂತರ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಹಾಗು ಅಲ್ಲಿ ಕೇಳಿರುವ ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಿ.
  • ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ / ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
  • ನಂತರ ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ವಿಳಾಸ, ಮೊಬೈಲ್ ಸಂಖ್ಯೆ ಇತ್ಯಾದಿ) ಸರಿಯಾಗಿ ಭರ್ತಿ ಮಾಡಿ, ಮುಂದಿನ ಹಂತಕ್ಕೆ ಹೋಗುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
  • ಅಪ್ಲಿಕೇಷನ್ ನಲ್ಲಿ ಯಾವುದೇ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಮೊದಲು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ ಅಪ್ಲೋಡ್ ಮಾಡಿ).
  • ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಮಾತ್ರ ಪಾವತಿಸಬೇಕು.

  • ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ರೂ. 200
  • ಪ.ಜಾತಿ, ಪ.ಪಂ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ – ಶುಲ್ಕ ವಿನಾಯಿತಿ ನೀಡಲಾಗಿದೆ.
ವಿವರಣೆದಿನಾಂಕ
ಆನ್‌ಲೈನ್ ಅರ್ಜಿ ಮತ್ತು ಶುಲ್ಕ ಪಾವತಿಗೆ ಪ್ರಾರಂಭ ದಿನಾಂಕಮಾರ್ಚ್ 13, 2026
ಆನ್‌ಲೈನ್ ಅರ್ಜಿಗೆ ಅಂತಿಮ ದಿನಾಂಕಏಪ್ರಿಲ್ 13, 2026
ಶುಲ್ಕ ಪಾವತಿಗೆ ಅಂತಿಮ ದಿನಾಂಕಏಪ್ರಿಲ್ 16, 2026
ವಿವರಣೆಲಿಂಕ್
ಅಧಿಕೃತ ಅಧಿಸೂಚನೆ (STENOGRAPHER)ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆ (TYPIST)ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆ (TYPIST COPYIST)ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆ (PEON)ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸುವ ಲಿಂಕ್ಇಲ್ಲಿ ಕ್ಲಿಕ್ ಮಾಡಿ (ಮಾರ್ಚ್ 13 ರಿಂದ ಪ್ರಾರಂಭ)
Telegram Group Linkಇಲ್ಲಿ ಕ್ಲಿಕ್ ಮಾಡಿ
WhatsApp Group Linkಇಲ್ಲಿ ಕ್ಲಿಕ್ ಮಾಡಿ